ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಪುನೀತ್ ರಾಜ್’ಕುಮಾರ್ ದಂಪತಿ

ಬೆಂಗಳೂರು: ಬಿಜೆಪಿ ಸಮಾವೇಶಕ್ಕಾಗಿ ನಗರಕ್ಕೆ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪತ್ನಿ ಅಶ್ವಿನಿ ಜೊತೆ ಭೇಟಿ ಮಾಡಿ, ಡಾ. ರಾಜ್ ಕುಮಾರ್ ಕುರಿತ ಪುಸ್ತಕ ನೀಡಿದ್ದಾರೆ.

ಈ ಬಗ್ಗೆ ಸಾಮಾಝಿಕ ತಾಣಗಳಲ್ಲಿ ಫೋಟೋ ಹಾಕಿ ತಮ್ಮ ಸಂತಸ ಹಂಚಿಕೊಂಡಿರುವ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಕ್ಲಬ್ ಪುಟದಲ್ಲಿ ಅವರು ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಲಾಗಿದೆ.

ಇದೇ ವೇಳೆ ಡಾ ರಾಜ್ ಕುಮಾರ್ ಅವರ ಬಗ್ಗೆ ಪುನೀತ್ ರಾಜ್ ಕುಮಾರ್ ಬರೆದಿರುವ ‘ವ್ಯಕ್ತಿತ್ವದ ಹಿಂದಿರುವ ವ್ಯಕ್ತಿ’ (person behind the personality) ಪುಸ್ತಕವನ್ನ ಪ್ರಧಾನಿಗೆ ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯ ಚುನಾವಣಾ ಆಯೋಗದ ರಾಯಭಾರಿ ಆಗಿದ್ದಾರೆ. ಕರ್ನಾಟಕದಲ್ಲಿ ಮೋದಿ ಭಾಷಣ ಮಾಡುವಾಗ ಡಾ ರಾಜ್ ಕುಮಾರ್ ಅವರ ಹೆಸರನ್ನು ಮೊನ್ನೆ ಪ್ರಸ್ತಾಪಿಸಿದ್ದರು.

Leave a Reply

Your email address will not be published. Required fields are marked *