ಬಿಜೆಪಿ ಶಾಸಕಾಂಗ ಪಕ್ಷ ನಾಯಕರಾಗಿ ಯಡಿಯೂರಪ್ಪ ಆಯ್ಕೆ: ಸರ್ಕಾರ ರಚಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ

ಬೆಂಗಳೂರು: ನಮ್ಮ ಬಿಜೆಪಿ ಶಾಸಕಾಂಗ ಪಕ್ಷ ನ‌ನ್ನನ್ನು ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ. ಆ ಪ್ರತಿಯನ್ನು ರಾಜ್ಯಪಾಲರಿಗೆ ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಬುಧವಾರ ಬೆಳಿಗ್ಗೆ 11ಕ್ಕೆ ರಾಜಭವನಕ್ಕೆ ಪಕ್ಷದ ಮುಖಂಡರ ಜತೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಹೊರ ಬಂದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಎಸ್​ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೇಳಿದ್ದೇನೆ. ರಾಜ್ಯಪಾಲರು ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ. ರಾಜ್ಯಪಾಲದಿಂದ ಉತ್ತರ ಬಂದ ನಂತರ ಎಲ್ಲಾ ತಿಳಿಸುತ್ತೇನೆ ಎಂದು ತಿಳಿಸಿದರು.

ಬುಧವಾರ ಬೆಳಗ್ಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆಯ ನಂತರ ರಾಜಭವನಕ್ಕೆ ತೆರಳಿದ ಬಿಎಸ್​ವೈ 105 ಶಾಸಕರ ಬೆಂಬಲ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

ನಾಯಕನನ್ನಾಗಿ ಆಯ್ಕೆಮಾಡಿರುವ ಪ್ರತಿಯನ್ನು ರಾಜ್ಯಪಾಲರಿಗೆ ಸಲ್ಲಿಸಿ, ಆದಷ್ಟು ಬೇಗ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕೋರಿ ಮನವಿ ಮಾಡಿದ್ದೇವೆ. ರಾಜ್ಯಪಾಲರು ಅದಕ್ಕೆ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಶೇ 100ಕ್ಕೆ 100ರಷ್ಟು ನಾವು ಸರ್ಕಾರ ರಚಿಸುತ್ತೇವೆ ಎಂದು ತಿಳಿಸಿದರು.

ನಮಗೆ ಬಹುಮತ ಇದೆ ಎಂಬುದನ್ನು ರಾಜ್ಯಪಾಲರಿಗೆ ಮನವರಿಕೆ‌ ಮಾಡಿಕೊಟ್ಟಿದ್ದೇವೆ. ನಾವು ಸರ್ಕಾರ ರಚಿಸುವುದು ನಿಶ್ಚಿತ ಎಂದರು.

ಸಂಬಧಿಸಿದ ಪೋಸ್ಟ್‌ಗಳು

Leave a Reply

Your email address will not be published. Required fields are marked *